ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 100-ಪದಕ

Advertisement

ಬೀಜಿಂಗ್: ಏಷ್ಯನ್‌ ಗೇಮ್ಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಸೆಂಚುರಿ ಬಾರಿಸಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು ತನ್ನ 100 ಪದಕವನ್ನು ಪಡೆಯುತ್ತಿದ್ದಂತೆ ಇತಿಹಾಸವನ್ನು ನಿರ್ಮಿಸಲಾಗಿದೆ. ಇದುವರೆಗೆ ಭಾರತಕ್ಕೆ 25 ಚಿನ್ನ, 35 ಬೆಳ್ಳಿ, 40 ಕಂಚಿನ ಪದಕ ಸೇರಿದಂತೆ ಒಟ್ಟು 100 ಪದಕಗಳು ಏಷ್ಯನ್‌ ಗೇಮ್ಸ್‌ನಲ್ಲಿ ಸಿಕ್ಕಿವೆ. ಸಾಮಾಜಿಕ ಜಾಲತಾಣದಲ್ಲಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ 100 ಪದಕಗಳನ್ನು ಗಳಿಸುವ ಮೂಲಕ ಇತಿಹಾಸವನ್ನು ಬರೆದ ಭಾರತೀಯ ತಂಡವನ್ನು ಅವರು ಅಭಿನಂದಿಸಿ ಭರವಸೆ ನೀಡಿದ್ದನ್ನು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.