ಬೆಂಗಳೂರು: ಪಲ್ಲಕ್ಕಿ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.
ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕೆಎಸ್ಆರ್ಟಿಸಿ ಪಲ್ಲಕ್ಕಿ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಒಟ್ಟು 148 ಬಸ್ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್ಗಳು ಒಳಗೊಂಡಿವೆ. 44 ಎಸಿ ಸ್ಲೀಪರ್ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. 4 ನಾನ್ ಎಸಿ ಸ್ಲೀಪರ್ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಉಳಿದಂತೆ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದಾರೆ, ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.