ಭಾರತ ಪಾಕ್ ಪಂದ್ಯ ಬೆಟ್ಟಿಂಗ್: ಅಡ್ಡೆಗಳ ಮೇಲೆ ದಾಳಿ

Advertisement


ಹುಬ್ಬಳ್ಳಿ: ವಿಶ್ವ ಕಪ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂರು ಅಡ್ಡೆಗಳ ಮೇಲೆ ಪ್ರತ್ಯೇಕ ದಾಳಿ ನಡೆಸಿದ ಹಳೇ ಹುಬ್ಬಳ್ಳಿ ಪೊಲೀಸರು 6 ಜನರನ್ನು ಬಂಧಿಸಿ ಅವರಿಂದ ೧೭.೫೦೦ ರೂ. ವಶಪಡಿಸಿಕೊಂಡಿದ್ದಾರೆ.
ಶನಿವಾರ ನಡೆದ ವಿಶ್ವಕಪ್ ನ ಭಾರತ ಪಾಕಿಸ್ತಾನ ಪಂದ್ಯದ ವೇಳೆ ಆರು ಜನರು ಬೆಟಿಂಗ್ ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೆಗ್ಗೇರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರು ಜನರನ್ನು ಬಂಧಿಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿವೆ.