ಹಾಡಿನ ಮೂಲಕ ಸಂಬಂಧ ಮೌಲ್ಯ ತಿಳಿಸಿದ ಡಾಲಿ

Advertisement

ಡಾಲಿ ಧನಂಜಯ್‌ ನಿರ್ಮಾಣದಲ್ಲಿ ತಯಾರಾಗಿರುವ ಗ್ರಾಮೀಣ ಸೊಗಡಿನ ಕಥೆ ಹೊಂದಿರುವ ‘ಟಗರು ಪಲ್ಯ’ ಇದೇ ಶುಕ್ರವಾರದಂದು ಬಿಡುಗಡೆಗೆ ಸಿದ್ದವಾಗಿದೆ. ಹಬ್ಬದ ವಿಶೇಷವಾಗಿ ‘ಸಂಬಂಜ ಅನ್ನೋದು ದೊಡ್ದು ಕನಾ’ ಎಂಬ ಹಾಡು ಡಾಲಿ ಪಿಕ್ಚರ್ಸ್ ಎಂಬ ಯುಟ್ಯೂಬ್‌ ಚಾನೆಲ್ ಮೂಲಕ ಬಿಡುಗಡೆ ಮಾಡಿದ್ದಾರೆ. ಈ ಹಾಡಿನಲ್ಲಿ ಬರುವ ಸಾಲಿನಲ್ಲಿ ಸಂಬಂಧದ ಮಹತ್ವವನ್ನು ಸಾರಲಾಗಿದೆ. ಸಂಬಂಧ ಮೌಲ್ಯ ತಿಳಿಸಿಕೊಡುವ ಹಾಡಿಗೆ ಧನಂಜಯ್ ಸಾಹಿತ್ಯ ಬರೆದಿದ್ದು, ಜೋಗಿ ಪ್ರೇಮ್ ಧ್ವನಿಯಾಗಿದ್ದಾರೆ. ವಾಸುಕಿ ವೈಭವ್ ಈ ಗೀತೆಗೆ ಸಂಗೀತ ಸಂಯೋಜಿಸಿದ್ದಾರೆ. ನಾಯಕರಾಗಿ ನಾಗಭೂಷಣ್, ತಾರಾ-ರಂಗಾಯಣ ರಘು ಪೋಷಕರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.