ಇ-ಪ್ರೊಕ್ಯೂರ್‌ಮೆಂಟ್‌ 2.0 ಪೋರ್ಟಲ್‌, ಡಿಐಎಸ್‌ ತಂತ್ರಾಂಶ ಲೋಕಾರ್ಪಣೆ

Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿಐಎಸ್ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.0
ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ ರೂ. 1 ಕೋಟಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ಧವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‌ನಲ್ಲಿ ಡ್ಯಾಷ್‌ಬೋರ್ಡ್‌ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ ರೂ. 50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲಾ ಟೆಂಡರ್‌ಗಳಿಗೆ ಮೂರು ತಿಂಗಳ ಅವಧಿಗೆ ಪ್ರಾಯೋಗಿಕ ಆಧಾರದ ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‌ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.