ಬೆಂಗಳೂರು: ನಮ್ಮ ಸಂಸ್ಕೃತಿಯೇ ನಮ್ಮ ಆಸ್ತಿಯಾಗಿದ್ದು, ಅದನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಬಿಡಿಎ ಕೇಂದ್ರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು ನಮ್ಮ ಸಂಸ್ಕೃತಿಯೇ ನಮ್ಮ ಆಸ್ತಿಯಾಗಿದ್ದು, ಅದನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ಕನ್ನಡ ಈ ಮಣ್ಣಿನ ಭಾಷೆ, ಅದು ನಮ್ಮ ತಾಯಿ ಹಾಗೂ ಹೃದಯದ ಭಾಷೆಯೂ ಹೌದು. ನಮ್ಮ ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ನಮ್ಮ ಪ್ರತಿ ವ್ಯವಹಾರದಲ್ಲಿ ಕನ್ನಡವನ್ನು ಬಳಸುವ ಮೂಲಕ ಕನ್ನಡದ ಗರಿಮೆಯನ್ನು ಹೆಚ್ಚಿಸಬೇಕು. ಸ್ವಾಭಿಮಾನಿ ಕನ್ನಡಿಗರರಾದ ನಾವು ನಮ್ಮ ಭಾಷೆಯನ್ನು ಪ್ರೀತಿಸಿ, ಇತರೆ ಭಾಷೆಗಳನ್ನು ಗೌರವಿಸೋಣ ಎಂದರು.