ಯತ್ನಾಳ್ ದ್ವೇಷದ ರಾಜಕಾರಣ

ಸಿದ್ದರಾಮಯ್ಯ
Advertisement

ಬೆಳಗಾವಿ: ಯತ್ನಾಳ್ ದ್ವೇಷದ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯಪುರದ ಹಜರತ್ ಹಾಶಿಂಪೀರ ದರ್ಗಾದ ಧರ್ಮಾಧಿಕಾರಿ ಸೈಯದ್ ಮೊಹಮ್ಮದ್ ತನ್ವೀರ್ ಹಶ್ಮಿ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದು, ಆತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು. ಈ ಕುರಿತು ಇಂದು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಹಳ ವರ್ಷಗಳಿಂದ ನನಗೆ ಹಾಶ್ಮಿಯವರ ಪರಿಚಯವಿದೆ. ಆಗೆಲ್ಲ ಇವರು ಸುಮ್ಮನಿದ್ದಾರೆ. ಯತ್ನಾಳ್ ಮಹಾನ್ ಸುಳ್ಳುಗಾರ, ಅಸಲಿಗೆ ಅವರು ವಿರೋಧ ಪಕ್ಷದ ನಾಯಕನ ಸ್ಥಾನ, ರಾಜ್ಯಾಧ್ಯಕ್ಷ ಸ್ಥಾನ ಎರಡೂ ಸಿಗದ ಕಾರಣ ಸುಳ್ಳು ಆರೋಪಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ, ಕೇಂದ್ರದಲ್ಲಿ ಅವರದೇ ಸರ್ಕಾರವಿದೆ, ತನಿಖೆ ಮಾಡಿಸಲಿ ಎಂದು ತಿರುಗೇಟು ನೀಡಿದರು.