ಸಕ್ಕರೆ ಕಾರ್ಖಾನೆಗಳು ರೈತರ ಹಿತ ಕಾಪಾಡಲಿ

Advertisement

ಬೆಳಗಾವಿ: ರಾಜ್ಯದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸಬೇಕು. ಒಂದು ಕಾಲದಲ್ಲಿ ದೇಶದಲ್ಲಿ ಸಕ್ಕರೆ ಆಮದು ಮಾಡಿಕೊಳ್ಳುವ ಸಂದರ್ಭವಿತ್ತು. ಆದರೆ ಈಗ ಕಬ್ಬು ಬೆಳೆ ದೇಶದ ಆರ್ಥಿಕತೆಗೆ ನೆರವಾಗುವ ಪ್ರಮುಖ ಬೆಳೆಯಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸಮೀಪದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ “ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ೨೦೨೨-೨೩ ನೇ ಸಾಲಿನ ಹಂಗಾಮು” ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಗತ್ತಿನ ವೈಜ್ಞಾನಿಕ ಕ್ರಾಂತಿಯಲ್ಲಿ ಕಬ್ಬು ಬೆಳೆಯ ಪಾತ್ರ ಸಾಕಷ್ಟಿದೆ. ಇನ್ನು ಸುಮಾರು ೧೦೦ ವರ್ಷಗಳ ಕಾಲ ಸಕ್ಕರೆ ಕಾರ್ಖಾನೆಗಳಿಗೆ ಉತ್ತಮ ಭವಿಷ್ಯವಿದೆ. ಕಾರ್ಖಾನೆಗಳಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಸಿಕ್ಕಿವೆ. ರಾಜ್ಯ ಸರ್ಕಾರಕ್ಕೆ ಈ ಉದ್ದಿಮೆಯಿಂದ ಸುಮಾರು ೩೫ ಸಾವಿರ ಕೋಟಿಯವರೆಗೆ ಆದಾಯವಾಗುತ್ತಿದೆ. ದೇಶದಲ್ಲಿ ಕಬ್ಬು ಬೆಳೆ ಬೆಳೆಯುವುದರಲ್ಲಿ ರಾಜ್ಯ ಈಗ ೨ ಎರಡನೇ ಸ್ಥಾನದಲ್ಲಿದೆ. ಮುಂದಿನ ದಿನದಲ್ಲಿ ಮೊದಲ ಸ್ಥಾನ ಅಲಂಕರಿಸಲಿದ್ದೇವೆ ಎಂದರು.