3 ಮಸೂದೆಗಳಿಗೆ ಅಂಕಿತ ಹಾಕಿದ ರಾಷ್ಟ್ರಪತಿ

Advertisement

ನವದೆಹಲಿ: ಕಳೆದ ವಾರ ಸಂಸತ್ತು ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಾಯಿಸಿದ್ದು, ಮೂರು ಹೊಸ ಕಾನೂನುಗಳಾಗಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಅಂಗೀಕರಿಸಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯಲ್ಲಿ ಮೊದಲ ಬಾರಿಗೆ ಭಯೋತ್ಪಾದನೆ ಪದವನ್ನು ವ್ಯಾಖ್ಯಾನಿಸಲಾಗಿದೆ. ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.