ಪಾಟೀಲ್ ಹೇಳಿಕೆ ಖಂಡಿಸಿ ರೈತರಿಂದ ಹೆದ್ದಾರಿ‌ ತಡೆ

Advertisement

ಶ್ರೀರಂಗಪಟ್ಟಣ: ರೈತರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ರೈತ ಮುಖಂಡರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಭೂಮಿ ತಾಯಿ ಹೋರಾಟ ಸಮಿತಿ ಮುಖ್ಯಸ್ಥ ಕೆ.ಎಸ್ ನಂಜುಂಡೇಗೌಡ ಹಾಗೂ ಅದ್ಯಕ್ಷ ಬಲ್ಲೇನಹಳ್ಳಿ ಕೃಷ್ಣಗೌಡ ನೇತ್ವದಲ್ಲಿ ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ‌ ಪ್ರತಿಭಟನೆ ನಡೆಸಿದ ನೂರಕ್ಕೂ ಹೆಚ್ಚು ರೈತರು ಸಚಿವರ ವಿರುದ್ಧ ಘೋಷಣೆ ಕೂಗಿ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.
ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ರೈತರನ್ನು ಕಡಗಡೆಸುತ್ತಿದ್ದು, ಅವರ ಸಂಪುಟ ಸಚಿವ ಶಿವಾನಂದ್ ಪಾಟೀಲ್, ರೈತರು ಸಾ ಸಾಲಮನ್ನಕ್ಕಾಗಿ ಬರಕ್ಕಾಗಿ ಕಾಯುತ್ತಾರೆ. 5 ಲಕ್ಷ ಪರಿಹಾರಕ್ಕಾಗಿ ಸಾವಿಗೆ ಶರಣಾಗುತ್ತಾರೆ ಎಂಬ ಅವರ ಹೇಳಿಕೆ ಖಂಡನೀಯ, ಕಾಂಗ್ರೆಸ್ ಸರ್ಕಾರ ಕೂಡಲೇ ಅವರನ್ನು ಸಂಪುಟದಿಂದ ಕೈಬಿಟ್ಟು ಪಕ್ಷದಿಂದ ವಜಾಗೊಳಿಸದಿದ್ದರೆ ಅವರ ಹೇಳಿಕೆ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರ ಸಚಿವ ಎನ್. ಚಲುವರಾಯಸ್ವಾಮಿ ಅವರ ಹೇಳಿಕೆಯಾಗಿರುತ್ತದೆ ಎಂದು ರೈತರು ಭಾವಿಸಬೇಕಾಗುತ್ತದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದ ಅಧಿಕಾರಿದಲ್ಲಿ ರೈತರನ್ನು ಹೀನಾಯವಾಗಿ ನಡೆಸುಕೊಳ್ಳುತ್ತಿದೆ, ಎಸ್‌ಪಿ ಯೊಬ್ಬರು ರೈತರಿಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ ಬೆದರಿಕೆ ಹೊಡ್ಡುತ್ತಿದ್ದಾರೆ ಇದರಿಂದಲೇ ಕಾಂಗ್ರೆಸ್ ಪಕ್ಷ ರೈತರಿಗೆ ಯಾವ ಗೌರವ ಕೊಡುತ್ತಿದೆ ಎಂದು ತಿಳಿಯುತ್ತಿದೆ ಎಂದರು.
ಇದೇ ವೇಳೆ ಮಾತನಾಡಿದ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಬಿ.ಸಿ ಕೃಷ್ಣಗೌಡ ಸಚಿವರ ಹೇಳಿಕೆ ಉದ್ದಟತನದ ಪರಮಾವಧಿಯಾಗಿದ್ದು, ರೈತರ ಕಷ್ಟ ಅರಿಯದೇ ಹಾಗೂ ರೈತರ ಸಂಕಷ್ಟವನ್ನು ಮನಗಾಣದ ಬಾಯಿಗೆ ಬಂದಂತೆ ಮಾತನಾಡಿರುವುದು ಖಂಡನೀಯ, ಬೇಕಾದರೆ ರೈತರೇ ಹಣ ಸಂಗಹಿಸಿ ಅವರಿಗೆ 50 ಲಕ್ಷ ರು. ಪರಿಹಾರ ನೀಡುತ್ತೇವೆ ಅವರೇ ನೇಣು ಹಾಕಿಕೊಳ್ಳಲಿ ಎಂದು ಸವಾಲು ಹಾಕಿದರು. ಈ ವೇಳೆ ತಾಲೂಕಿನ ವಿವಿದೆಡೆಗಳಿಂದ ಆಗಮಿಸಿದ್ದ ನೂರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿದ್ದರು.