ಹಳೆ ಪಿಂಚಣಿ ವ್ಯವಸ್ಥೆಗೆ ರಾಜ್ಯ ಸರ್ಕಾರಿ ನೌಕರರು

ವಿಧಾನಸೌಧ
Advertisement

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರನ್ನು ಸರ್ಕಾರ ಹಳೇ ಪಿಂಚಣಿ ಯೋಜನೆಗೆ ಒಳಪಡಿಸಿ ಆದೇಶ ಹೊರಡಿಸಿದೆ.
ಏಪ್ರಿಲ್ ೧ ೨೦೦೬ ಪೂರ್ವದಲ್ಲಿ ಹೊರಡಿಸಲಾದ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ಅಥವಾ ತದನಂತರ ರಾಜ್ಯ ಸರ್ಕಾರಿ ಸೇವೆಗೆ ಸೇರಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟಿರುವ ನೌಕರರನ್ನು ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸುವಂತೆ ಸರ್ಕಾರದ ಉಪ ಕಾರ್ಯದರ್ಶಿ ಆರ್ಥಿಕ ಇಲಾಖೆ(ಆಡಳಿತ ಮತ್ತು ಸಮನ್ವಯ) ಆದೇಶ ಹೊರಡಿಸಿದ್ದಾರೆ.
ಹಳೆಯ ಡಿಫೈನ್ಡ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ಕೆಲವು ಷರತ್ತು ವಿಧಿಸಿದೆ. ಒಂದು ಬಾರಿ ಮಾತ್ರ ಪಿಂಚಣಿ ವ್ಯವಸ್ಥೆಗೆ ಒಳಪಡಿಸಬೇಕು. ೨೦೦೪ರ ಏಪ್ರಿಲ್ ೧ರಂದು ಹೊರಡಿಸಿದ ನೇಮಕಾತಿ ಅಧಿಸೂಚನೆ ಹಾಗೂ ತದನಂತರದಲ್ಲಿ ರಾಜ್ಯ ಸರ್ಕಾರಿ ಸೇವೆಗೆ ನೇಮಗೊಂಡ ನೌಕರರು ಹಳೆಯ ಪಿಂಚಣಿ ವ್ಯವಸ್ಥೆಗೆ ಸೇರಲು ಇಚ್ಚಿಸಿದ್ದಲ್ಲಿ ನಿಗದಿತ ನಮೂನೆಯಲ್ಲಿ ಜೂನ್ ೩೦, ೨೦೨೪ರೊಳಗೆ ನಿಗದಿತ ನಮೂನೆಯಲ್ಲಿ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇಲ್ಲದಿದ್ದರೆ ಎನ್‌ಪಿಎಸ್‌ನಲ್ಲೇ ಮುಂದುವರೆಯುತ್ತಾರೆ.
ಬರುವ ಜುಲೈ ೩೧ರೊಳಗಾಗಿ ನೌಕರರನ್ನು ಹಿಂದಿನ ಡಿಫೈನ್ಸಡ್ ಪಿಂಚಣಿ ಯೋಜನೆಗೆ ಒಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆ ಸಲ್ಲಿಸಬೇಕು. ಇಲಾಖೆಯ ಮುಖ್ಯಸ್ಥರು ಈ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಡ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹರಾಗಿರುವ ನೌಕರರ ಪಟ್ಟಿಯನ್ನು ಆಗಸ್ಟ್ ೩೧ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗೆ ಸಲ್ಲಿಸಬೇಕು ಎಂದು ಸೂಚಿಸಿದೆ.