ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಹಳೇ ಪಿಂಚಣಿ ಯೋಜನೆ ಜಾರಿ

Advertisement

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರು ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸಿದ್ದರಾಮಯ್ಯ ಸರ್ಕಾರ ಸ್ಪಂದಿಸಿದೆ.
ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ. ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದಿದ್ದಾರೆ.