ಅಡ್ವಾಣಿಗೆ ಭಾರತ ರತ್ನ: ಮೋದಿಗೆ ಅಭಿನಂದನೆ ಸಲ್ಲಿಸಿದ ಶೆಟ್ಟರ್

Advertisement

ಹುಬ್ಬಳ್ಳಿ : ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ, ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿರುವುದ್ದಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಪ್ರಗತಿಪರ ಕೆಲಸಗಳಿಗೆ ದಾರಿಹಾಕಿದ ಮಹಾನ ನಾಯಕನಿಗೆ ರಾಷ್ಟ್ರದ ಅತ್ಯುನ್ನತ ಗೌರವ ಲಭಿಸಿರುವುದು ಸಂತಸದ ಸಂಗತಿ. ಅವರ ಮಾರ್ಗದರ್ಶನ ನಮಗೆ ಮಾದರಿಯಾಗಿದೆ ಎಂದು ಜಗದೀಶ್ ಶೆಟ್ಟರ್ ಅವರು ಬಣ್ಣಿಸಿದ್ದಾರೆ.

ಬಿಜೆಪಿ ಪಕ್ಷದ ನಾಯಕರಾಗಿ ಹಾಗೂ ಉಪಪ್ರಧಾನಿಯಾಗಿ ರಾಷ್ಟ್ರದ ಏಳಿಗೆಗೆ ಅಭೂತಪೂರ್ವ ಕಾರ್ಯಗಳನ್ನು ಕೈಗೊಂಡಿದ್ದಾರೆ.

ರಾಜ್ಯಸಭೆ ಸದಸ್ಯ ಸ್ಥಾನ, ಭಾರತೀಯ ಜನಸಂಘದ ಅಧ್ಯಕ್ಷ ಗೌರವ, ಮಾಹಿತಿ ಮತ್ತು ಪ್ರಸಾರ ಸಚಿವ ಸ್ಥಾನ, ಗೃಹ ಮಂತ್ರಿ ಹಾಗೂ ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ದೇಶಕ್ಕೆ ಅವರು ನೀಡಿದ ಕೊಡುಗೆಗಳನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದಾರೆ. ಇಂತಹ ಹಿರಿಯ ನಾಯಕರಿಗೆ ಭಾರತ ರತ್ನ ಪ್ರಶಸ್ತಿ ನೀಡುತ್ತಿರುವುದು ಖುಷಿಯ ವಿಚಾರವಾಗಿದೆ ಎಂದು ಅವರು ತಿಳಿಸಿದ್ದಾರೆ.