ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ

ಆರ್‌. ಅಶೋಕ
Advertisement

ಬೆಂಗಳೂರು: ಇಂದು ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್‌ ಅಡ್ಡ ಮತದಾನದ ಕುರಿತು ಮಾತನಾಡಿದ ಅವರು, ಸೋಮಶೇಖರ್ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಂದಾಗಿದ್ದು,‌ ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ತಿಳಿಸಿದ್ದಾರೆ ಎಂದರು.
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತಾಡಿದ್ದರು. ನಾವು ಪಕ್ಷಕ್ಕೆ ಮೋಸ ಮಾಡಲ್ಲ ಅಂದಿದ್ದರು. ತಾಯಿಗೆ ಮೋಸ ಮಾಡಲ್ಲ ಅಂದಿದ್ದರು. ಆದ್ರೆ, ಸೋಮಶೇಖರ್ ಅಡ್ಡ ಮತದಾನ ಮಾಡಿದಾರೆ ಅಂತ ಗೊತ್ತಾಗಿದೆ. ಇಂದು ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ. ಸೋಮಶೇಖರ್ ಅವರೇ ನಿನ್ನೆ ಕರೆ ಮಾಡಿ ದ್ರೋಹ ಬಗೆಯಲ್ಲ ಎಂದು ಹೇಳಿದ್ದರು. ಸೋಮಶೇಖರ್ ಡಿ.ಕೆ. ಶಿವಕುಮಾರ್ ಜೊತೆಗೆ, ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನು ಕ್ಷಮಿಸಲ್ಲ ಎಂದು ಕಿಡಿಕಾರಿದರು.