ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಮೋದಿ ಸಫಾರಿ

Advertisement

ಅಸ್ಸಾಂ: ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಂಗಲ್ ಸಫಾರಿ ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹಲವು ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ,

ನಮ್ಮ ಕಾಡುಗಳು ಮತ್ತು ವನ್ಯಜೀವಿಗಳನ್ನು ಧೈರ್ಯದಿಂದ ರಕ್ಷಿಸುವ, ಸಂರಕ್ಷಣಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ಅರಣ್ಯ ರಕ್ಷಕರ ತಂಡ ವಾನ್ ದುರ್ಗ ಅವರೊಂದಿಗೆ ಸಂವಾದ ನಡೆಸಿದರು. ನಮ್ಮ ನೈಸರ್ಗಿಕ ಪರಂಪರೆಯನ್ನು ಕಾಪಾಡುವಲ್ಲಿ ಅವರ ಸಮರ್ಪಣೆ ಮತ್ತು ಧೈರ್ಯ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದಿದ್ದಾರೆ.

ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಲು ಮತ್ತು ಅದರ ಭೂದೃಶ್ಯಗಳ ಅಪೂರ್ವ ಸೌಂದರ್ಯ ಸವಿಯಲು ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಮೋದಿ ಅವರು ಇಂದು ಮಧ್ಯಾಹ್ನ ಜೋರ್ಹತ್‌ನಲ್ಲಿ ಪೌರಾಣಿಕ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ ‘ಶೌರ್ಯದ ಪ್ರತಿಮೆ’ಯನ್ನು ಉದ್ಘಾಟಿಸಲಿದ್ದಾರೆ. ನಂತರ ಜೋರ್ಹತ್ ಜಿಲ್ಲೆಯ ಮೆಲೆಂಗ್ ಮೆಟೆಲಿ ಪೋಥಾರ್‌ಗೆ ತೆರಳಲಿರುವ ಪ್ರಧಾನಿ, ಅಲ್ಲಿ ಸುಮಾರು 18,000 ಕೋಟಿ ರೂಪಾಯಿ ಮೌಲ್ಯದ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.