ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

Advertisement

ನವದೆಹಲಿ: ಕೇಂದ್ರ ಸರ್ಕಾರ ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ.
ಗೃಹ ಸಚಿವಾಲಯ ಇಂದು ಪೌರತ್ವ ಕಾಯ್ದೆ 2019 (CAA-2019)ಅಡಿಯಲ್ಲಿನ ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ 2024ರ ನಿಯಮದ ಪ್ರಕಾರ CAA-2019 ಅಡಿಯಲ್ಲಿ ಅರ್ಹರಾಗಿರುವ ವ್ಯಕ್ತಿಗಳು ಭಾರತೀಯ ಪೌರತ್ವ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಹಾಗೂ ಅರ್ಹರಿಗೆ ಪೌರತ್ವ ನೀಡಲು ಅನುವು ಮಾಡಿಕೊಡುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಪ್ರತಿಭಟನೆ, ವಿರೋಧಗಳಿಂದ ವಿಳಂಬವಾಗಿತ್ತು. ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಸಿಎಎ ನಿಮಯಗಳ ಅಧಿಸೂಚನೆ ಹೊರಡಿಸಲಾಗಿದೆ.