ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ

Advertisement

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಇದರ ಬೆನ್ನಲ್ಲೇ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.

ಪರೀಕ್ಷೆ-2ರ ವೇಳಾಪಟ್ಟಿ
ಜೂನ್‌ 07 – ಪ್ರಥಮ ಭಾಷೆ
ಜೂನ್‌ 08 – ತೃತೀಯ ಭಾಷೆ
ಜೂನ್‌ 10 – ಗಣಿತ, ಸಮಾಜ ವಿಜ್ಞಾನ
ಜೂನ್‌ 11 – ಅರ್ಥಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌
ಜೂನ್‌ 12 – ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಜೂನ್‌ 13 – ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)
ಜೂನ್‌ 14 – ಸಮಾಜ ಶಾಸ್ತ್ರ