ಏತನೀರಾವರಿ ಯೋಜನೆಯಡಿ ಕಾಲುವೆ ಮೂಲಕ ಕೆರೆಗಳಿಗೆ ನೀರು

Advertisement

ಬೆಂಗಳೂರು: ಇಂಡಿ ಹಾಗೂ ಬಸವನ ಬಾಗೇವಾಡಿ ತಾಲ್ಲೂಕಿನ ಬಹುಗ್ರಾಮಗಳ ಕೆರೆಗಳಿಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ.
ನೀತಿಸಂಹಿತೆ ಕಾರಣ ಚುನಾವಣಾ ಆಯೋಗದ ಅನುಮತಿ ಪಡೆದು, ಕಾಲುವೆ ಮೂಲಕ ನೀರು ಹರಿಸಲು ಆದೇಶ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಬಿರು ಬೇಸಿಗೆಯಿಂದ ತತ್ತರಿಸಿದ ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಲು ಆಲಮಟ್ಟಿ ಜಲಾಶಯದಿಂದ ಮುಳವಾಡ ಏತ ನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಗುರುವಾರದಿಂದ ಕಾಲುವೆಗಳ ಮೂಲಕ ಕೆರೆಗಳಿಗೆ ನೀರು ಹರಿಸುವಂತೆ ಸೂಚಿಸಿದ್ದು ಅದು ಕಾರ್ಯಗತವಾಗುತ್ತಿದೆ.

ಕೆಲವು ದಿನಗಳ ಹಿಂದೆ ತಿಡಗುಂದಿ ಕಾಲುವೆಯಿಂದ ನೀರು ಹರಿಸಿ, ಭೂತನಾಳ ಕೆರೆ ತುಂಬಿಸಿ, ವಿಜಯಪುರ ನಗರದಲ್ಲಿ ಸಮಪರ್ಕವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈಗ ಮತ್ತೆ ಭೂತನಾಳ ಕೆರೆ, ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯಡಿ ತಿಡಗುಂದಿ ಕಾಲುವೆ ಮೂಲಕ ನೀರು ಹರಿಸಲಾಗುವುದು.

ಬಸವನಬಾಗೇವಾಡಿ ತಾಲೂಕಿನ ಅರೇಶಂಕರ ಮತ್ತು ಇತರೆ 19 ಗ್ರಾಮಗಳ ಕಣಕಾಲ ಮತ್ತು 11 ಗ್ರಾಮಗಳ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯು 0.45ಟಿ.ಎಂ.ಸಿ ನೀರನ್ನು ಮುಳವಾಡ ಏತನೀರಾವರಿ ಹಾಗೂ ಚಿಮ್ಮಲಗಿ ಏತನೀರಾವರಿ ಯೋಜನೆಯಡಿ ಕೆರೆಗಳಿಗೆ ಹರಿಸಲಾಗುವುದು.

ನೀತಿಸಂಹಿತೆ ಕಾರಣ ಚುನಾವಣಾ ಆಯೋಗದ ಅನುಮತಿ ಪಡೆದು, ಕಾಲುವೆ ಮೂಲಕ ನೀರು ಹರಿಸಲು ಆದೇಶ ನೀಡಲಾಗಿದೆ ಎಂದಿದ್ದಾರೆ.