ಉಚಿತ ಪಡಿತರ ಮಿತಿ ಐದು ಕೆಜಿಯಿಂದ 10 ಕೆಜಿಗೆ

Advertisement

ಲಕ್ನೋ: ಉಚಿತ ಪಡಿತರ ಮಿತಿಯನ್ನು ಐದು ಕೆಜಿಯಿಂದ 10 ಕೆಜಿಗೆ ಹೆಚ್ಚಿಸಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಬುಧವಾರ ಲಖನೌದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು. ದೇಶದ ಭವಿಷ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಇಲ್ಲದಿದ್ದರೆ ನಾವು ಮತ್ತೆ ಗುಲಾಮರಾಗುತ್ತೇವೆ ಎಂದಿದ್ದಾರೆ. ಪ್ರಜಾಪ್ರಭುತ್ವವಿಲ್ಲದಿದ್ದರೆ ದೇಶದಲ್ಲಿ ನಿರಂಕುಶಾಧಿಕಾರ ಮತ್ತು ಸರ್ವಾಧಿಕಾರ ತಲೆದೋರುತ್ತದೆ, ಅದಕ್ಕೆ ಕಡಿವಾಣ ಹಾಕಲು ದೇಶದ ಜನರು ನಿರ್ದರಿಸಿದ್ಧಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಹೇಳಿದರು. ದೇಶದಲ್ಲಿ ವಿರೋಧ ಪಕ್ಷದ ನಾಯಕರು ಸ್ಪರ್ಧೆ ಮಾಡಿರುವ ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ತಗೆಸುವ ಕೆಲಸ ನಡೆಯುತ್ತಿದ್ದು ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಗಂಡಾಂತರ. ಇಂತಹುದನ್ನು ತಡೆಯಬೇಕಾಗಿದೆ. ಇಲ್ಲಿದ್ದರೆ ಉಳಿಗಾಲವಿಲ್ಲ ಎಂದು ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಬಿಜೆಪಿಯ ಮಹಿಳಾ ಅಭ್ಯರ್ಥಿಯೊಬ್ಬರು ಬುರ್ಖಾ ತೊಡಿಸಿ ಮಹಿಳೆಯರ ಗುರುತನ್ನು ಪರಿಶೀಲಿಸುವುದನ್ನು ನೋಡಿದ್ದೇನೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಎಂದರೆ ಹೀಗೆನಾ ಎಂದು ಅವರು ಪ್ರಶ್ನಿಸಿದ್ದಾರೆ.