ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ: ರೌಡಿಶೀಟರ್ ಗೆ ಗುಂಡು

ಪತ್ನಿಗೆ ಬೆದರಿಸಿದ ಪತಿ
Advertisement

ಬೀದರ್ : ಹಲವಾರು ಪ್ರಕರಣಗಳಲ್ಲಿ ಶಾಮೀಲಾಗಿರುವ ರೌಡಿಶೀಟರ್ ಓರ್ವನನ್ನು ಬಂಧಿಸಿ ಕರೆತಂದ ಇಲ್ಲಿಯ ನೂತನ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.