ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಅನಾಹುತ..!

Advertisement

ಬಂಟ್ವಾಳ : ಏಕಾಏಕಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರೋ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ಟ್ಯಾಂಕರ್ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿತ್ತು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಏಕಾಏಕಿ ಪಲ್ಟಿಯಾಗಿದೆ. , ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.