ಚಿಕ್ಕೋಡಿ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಕೈ ಕಾರ್ಯಕರ್ತನೊಬ್ಬ ಸಂಭ್ರಮಿಸಿದ್ದಾನೆ.
ಮತ ಎಣಿಕೆ ಕೇಂದ್ರದ ಬಳಿ ಆರ್.ಡಿ. ಹೈಸ್ಕೂಲ್ ಮೈದಾನದ ಎದುರು ಸಂಭ್ರಮಾಚರಣೆ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಈ ವಿಡಿಯೋ ಎಲ್ಲಡೆ ವೈರಲ್ ಆಗಿದೆ. ಇನ್ನು ಘೋಷಣೆ ಕೂಗಿದ ಜಮೀರ್ ನಾಯ್ಕವಾಡಿ(26) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.