ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಮಹಾಬಲೇಶ್ವರ ಆಯ್ಕೆ

ರಾಜ್ಯೋತ್ಸವ ಪ್ರಶಸ್ತಿ
Advertisement

ಮಂಗಳೂರು: ಕೋಟದ ಪತ್ರಿಷ್ಠಿತ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆದ ಕರ್ಣಾಟಕ ಬ್ಯಾಂಕ್ ಆಡಳಿತ ನಿರ್ದೇಶಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್ ಆಯ್ಕೆಯಾಗಿದ್ದಾರೆ.
ನ. 15, 16ರಂದು ಪಂಚವರ್ಣ ಯುವಕ ಮಂಡಲ ಕೋಟ ಇದರ ರಜತಮಹೋತ್ಸವ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ಕೋಟದ ಅಮೃತೇಶ್ವರಿ ದೇವಳದ ಸಮೀಪ ವರುಣತೀರ್ಥ ಕೆರೆ ಸನಿಹದಲ್ಲಿ ಆಯೋಜಿಸಲಾಗುವ ಕನ್ನಡ ರಾಜ್ಯೋತ್ಸವ ಸದ್ಭಾವನಾ-2022 ಶೀರ್ಷಿಕೆಯಡಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯೊಂದಿಗೆ ಬೆಳ್ಳಿಯ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.