ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಸಾಧ್ಯತೆ

Advertisement

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನೋಟಿಸ್‌ ನೀಡಿದೆ.
ಅಷ್ಟೇ ಅಲ್ಲದೇ ಸಂತ್ರಸ್ತೆಯ ಪುತ್ರ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶಿಸಿ ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಬಿಎಸ್‌ವೈ ವಿರುದ್ಧ ಸಂತ್ರಸ್ತೆಯ ತಾಯಿ ದೂರು ನೀಡಿದ್ದು, ಮಾರ್ಚ್ 14ರಂದು ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಸರ್ಕಾರ ಇದನ್ನು ಸಿಐಡಿಗೆ ವರ್ಗಾಯಿಸಿತ್ತು. ಏಪ್ರಿಲ್‌ 12 ರಂದು ತನಿಖಾಧಿಕಾರಿಯ ಮುಂದೆ ಯಡಿಯೂರಪ್ಪ ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದರು. ಈ ಪ್ರಕರಣ ದಾಖಲಾದ ನಂತರ ಸಂತ್ರಸ್ತೆ ಮೃತಪಟ್ಟಿದ್ದಾರೆ. ಈಗ ಸಂತ್ರಸ್ತೆಯ ಪುತ್ರ ಹೈಕೋರ್ಟ್‌ ಮೆಟ್ಟಿಲೇರಿ ಪ್ರಕರಣದ ದಾಖಲಾಗಿ ಮೂರು ತಿಂಗಳಾದರೂ ಯಾವುದೇ ಬೆಳವಣಿಗೆ ನಡೆದಿಲ್ಲ. ಇಷ್ಟು ದಿನವಾದರೂ ಯಡಿಯೂರಪ್ಪ ಅವರನ್ನು ಬಂಧಿಸಿಲ್ಲ ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನು ಈ ಕುರಿಂತೆ ಗೃಹ ಸಚಿವ ಜಿ ಪರಮೇಶ್ವರ ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದು., ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸಲಿದ್ದಾರೆ. ಯಡಿಯೂರಪ್ಪ ಬಂದು ನೋಟಿಸ್​ಗೆ ಉತ್ತರ ನೀಡಬೇಕಾಗುತ್ತದೆ ಎಂದರು.