ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು

Advertisement

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಹಿರಿಯ ಬಿಜೆಪಿ ನಾಯಕನಿಗೆ ವಿಶೇಷ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. “ಎಲ್‌ಕೆ ಅಡ್ವಾಣಿ ಅವರನ್ನು ಏಮ್ಸ್‌ ಹೊಸದಿಲ್ಲಿಗೆ ದಾಖಲು ಮಾಡಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ನಿಗಾವಣೆಯಲ್ಲಿ ಇದ್ದಾರೆ” ಎಂದು ಏಮ್ಸ್ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ. ವಯೋಸಹಜ ಅನಾರೋಗ್ಯ ಸಮಸ್ಯೆಗಳ ಕಾರಣದಿಂದ ಅವರನ್ನು ಪರಿಣತರ ವೈದ್ಯರು ಪ್ರತ್ಯೇಕ ವಾರ್ಡ್‌ನಲ್ಲಿ ಚಿಕಿತ್ಸೆಗೆ ಒಳಪಡಿಸಿದೆ.