ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್‌ಚಾರ್ಜ್

Advertisement

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗಿದೆ.
ಬುಧವಾರ ತಡರಾತ್ರಿ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. 96 ವರ್ಷದ ಎಲ್‌.ಕೆ.ಅಡ್ವಾಣಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ಕಾರಣ ಆಸ್ಪಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂಬುದಾಗಿ ಏಮ್ಸ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ‌