ಹುಬ್ಬಳ್ಳಿಯಲ್ಲಿ ಗ್ಯಾಸ್​​ ಸಿಲಿಂಡರ್ ಸ್ಫೋಟ: ಐದು ಮನೆಗಳು ಬೆಂಕಿಗಾಹುತಿ

hubli
Advertisement

ಹುಬ್ಬಳ್ಳಿ : ಗುರುವಾರ ಬೆಳಗ್ಗೆ ಗ್ಯಾಸ್​​ ಸಿಲಿಂಡರ್ ಸ್ಪೋಟಗೊಂಡ ಪ್ರಕರಣ ಹಸಿಯಾಗಿರುವಾಗಲೇ ಮತ್ತೊಂದು ಗ್ಯಾಸ್​​ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಡೆದಿದೆ.

ಸಿಲಿಂಡರ್ ಸ್ಫೋಟಕ್ಕೆ ಐದು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮನೆಯಲ್ಲಿ ಯಾರೂ ಇಲ್ಲದಿರುವಾಗ ಶಾರ್ಟ್‌ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿಯಿಂದ ಸಿಲಿಂಡರ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.