ನಂದಿನಿ ಹಾಲು, ಮೊಸರಿನ ದರದಲ್ಲಿ ಏರಿಕೆ

ನಂದಿನಿ
Advertisement

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳ ನಾಳೆಯಿಂದಲೇ ಜಾರಿಗೆ ಬರುವಂತೆ ಪ್ರತಿ ಲೀಟರ್​ಗೆ 3 ರೂಪಾಯಿ ಏರಿಕೆ ಮಾಡಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ ನೀಡಿದೆ. ಹಾಲು, ಮೊಸರಿನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ.
ಟೋನ್ಡ್ ಹಾಲಿನ ದರ ಪ್ರತಿ ಲೀಟರ್​ಗೆ 37 ರಿಂದ 40 ರೂ, ಸ್ಪೆಷಲ್ ಹಾಲಿನ ದರ 43 ರಿಂದ 46 ರೂಪಾಯಿ, ಶುಭಂ ಹಾಲಿನ ದರ 43 ರಿಂದ 46 ರೂ, ಸಮೃದ್ಧಿ ಹಾಲಿನ ದರ 48 ರಿಂದ 51 ರೂ ಹಾಗೂ ಮೊಸರಿನ ದರ 45 ರಿಂದ 48 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.