ಪ್ರದೀಪನದ್ದು ದುಡುಕಿನ ನಿರ್ಧಾರ: ಸುರ್ಜೆವಾಲಾ

ಪ್ರದೀಪ್
Advertisement

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿ ಕಗ್ಗಲೀಪುರದ ಪ್ರದೀಪ್ ಅವರ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿದಂತೆ ಕಾಂಗ್ರೆಸ್ ನಾಯಕರು ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ವೇಳೆ ರಣದೀಪ್ ಸುರ್ಜೆವಾಲಾ ಮಾತನಾಡಿ, ಪ್ರದೀಪ್ ಕುಟುಂಬ ಅತೀವ ದುಃಖದಲ್ಲಿದೆ. ಪ್ರದೀಪ್ ಕುಟುಂಬದ ದುಃಖ ಹಂಚಿಕೊಳ್ಳಲು ಬಂದಿದ್ದೇವೆ. ಪ್ರದೀಪ್ ದುಡುಕಿ ನಿರ್ಧಾರ ತೆಗೆದುಕೊಂಡಿದ್ದಾರೆ. ಸಂತೋಷ್ ಪಾಟೀಲ್, ಪ್ರದೀಪ್, ಪ್ರಸಾದ್ ಇವೆಲ್ಲ ಕೇವಲ ಹೆಸರುಗಳಲ್ಲ, ಭ್ರಷ್ಟ ಸರ್ಕಾರದಿಂದ ಆಗುತ್ತಿರುವ ಸಾವುಗಳು. ಶೇ 40ರಷ್ಟು ಕಮಿಷನ್​​ನಿಂದ ಜೀವದ ಮೇಲೆ ಜೀವ ಬಲಿಯಾಗುತ್ತಿದೆ ಎಂದರು. ಶಾಸಕರ‌ ದುರ್ವರ್ತನೆಯಿಂದ‌ ಅನೇಕ ಸಾವುಗಳು ಸಂಭವಿಸುತ್ತಿವೆ ಎಂದು‌ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಎರಡು ಮೂರು ಪೇಜ್ ಗಳಲ್ಲಿ ಡೆತ್ ನೋಟ್ ಬರೆದಿದ್ದಾರೆ. ಎಲ್ಲರಿಗೂ ಏನು ಕಾನೂನು ಇದೆ ಅದರಂತೆ ಈ ಪ್ರಕರಣವೂ ತನಿಖೆಗೊಳಗಾಗಬೇಕು ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.