ಮಂಗಳೂರಿನಲ್ಲಿ ಎಂ.ಎಸ್. ಧೋನಿ

ಧೋನಿ
Advertisement

ಮಂಗಳೂರು: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಶಾಸಕ ಯು.ಟಿ. ಖಾದರ್ ಅವರ ಸಹೋದರ ಯು.ಟಿ.ಇಫ್ತಿಕಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಕಾಸರಗೋಡಿನ ಡಾ.ಶಾಜೀರ್ ಗಫಾರ್ ಅವರ ತಂದೆ ಪ್ರೊ.ಕೆ.ಕೆ. ಅಬ್ದುಲ್ ಗಫಾರ್ ಅವರ ಆತ್ಮಕಥನ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಧೋನಿ ಮಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಲು ಮುಗಿಬಿದ್ದ ದೃಶ್ಯವೂ ಕಂಡುಬಂತು.