ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ

Advertisement

ಹಾವೇರಿ: ಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಮಾರೋಪಗೊಳ್ಳುತ್ತಿದೆ. ಕಳೆದ ಎರಡು ದಿನಗಳಿಂದ ಸಾಹಿತ್ಯದ ಕಂಪು ಇಡೀ ಕರ್ನಾಟಕಕ್ಕೆ ಪಸರಿಸಿದೆ. ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದು, ವಿವಿಧ ಗೋಷ್ಠಿಗಳು ನಡೆದು, ಸಾಹಿತಿಗಳು ಪಾಲ್ಗೊಂಡಿದ್ದಾರೆ. ಇಲ್ಲಿ ಯಶಸ್ವಿಯಾಗಿ ನಡೆದಿರುವ ಸಮ್ಮೇಳನಕ್ಕೆ ದುಡಿದ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ. ಸಾಹಿತಿಗಳ ಅನಿಸಿಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ವ್ಯವಸ್ಥಿತವಾಗಿ ನನ್ನ ತವರು ಜಿಲ್ಲೆಯಲ್ಲಿ ಎಲ್ಲರೂ ಸೇರಿ ನಡೆಸಿದ್ದು ಸಂತೋಷ ತಂದಿದೆ. ಇದಕ್ಕಾಗಿ ಸಮಸ್ತ ಹಾವೇರಿ ಜಿಲ್ಲೆಯ ಜನರಿಗೆ ಅಭಿನಂದಿಸಿದರು.