‘ನಾ ನಾಯಕಿ’ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ

ಡಿಕೆಶಿ
Advertisement

ಬೆಂಗಳೂರು: ಜ. 16ರಂದು ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡ ‘ನಾ ನಾಯಕಿ’ ಸಮಾವೇಶದಲ್ಲಿ ನಾಯಕಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರ ಸಬಲೀಕರಣ ಉದ್ದೇಶದಿಂದ ಹಮ್ಮಿಕೊಂಡ ಈ ಸಮಾವೇಶದಲ್ಲಿ ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಸ್ಪರ್ಧಿಸಿದ ಮಹಿಳಾ ನಾಯಕಿಯರು ಭಾಗವಹಿಸಲಿದ್ದಾರೆ. ಮಹಿಳೆಯರಿಗೆ ಪಕ್ಷ ನೀಡುವ ಭರವಸೆಗಳನ್ನು ಸಮಾವೇಶದಲ್ಲಿ ಪ್ರಿಯಾಂಕಾ ಘೋಷಣೆ ಮಾಡಲಿದ್ದಾರೆ ಎಂದರು.