ಸುಪ್ರಿಂನಲ್ಲಿ ಗೋವಾ ಬಲವಾದ ವಾದ

Goa
Advertisement

ಪಣಜಿ: ಮಹದಾಯಿ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ನಾವು ಬಲವಾಗಿ ವಾದ ಮಾಡುತ್ತಿದ್ದೇವೆ. ಕರ್ನಾಟಕ ಸರ್ಕಾರವನ್ನು ವಿವಿಧ ಹಂತಗಳಲ್ಲಿ ವಿರೋಧಿಸಲು ೪ ತಿಂಗಳಲ್ಲಿ ೧೫ ಕಡೆ ಪತ್ರ ವ್ಯವಹಾರ ನಡೆಸಲಾಗಿದೆ. ಆಡಳಿತಾತ್ಮಕ ಮಟ್ಟದಲ್ಲಿ ಗೋವಾ ರಾಜ್ಯ ಸರ್ಕಾರ ಅಗತ್ಯ ನಿರ್ಧಾರಗಳನ್ನು ಕೈಗೊಂಡಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮಹದಾಯಿ ಹೋರಾಟದಲ್ಲಿ ನಾವು ಗೆಲ್ಲುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ವಿಧಾನಸಭಾ ಅಧಿವೇಶನದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ನಾಯಕ ಯೂರಿ ಅಲೆಮಾಂವ ಮಧ್ಯ ಪ್ರವೇಶಿಸಿ ಮಾತನಾಡಿ, ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ಜನತೆ ನಮ್ಮನ್ನು ನೋಡುತ್ತಿರುತ್ತಾರೆ. ಯಾವಾಗ ಖಾಸಗಿ ಸಂಸ್ಥೆಯೊಂದು ಸಾಖಳಿಯಲ್ಲಿ ಬೈಠಕ್ ಆಯೋಜಿಸಿದಾಗ ಅದಕ್ಕೆ ನಾವು ಬೆಂಬಲ ವ್ಯಕ್ತಪಡಿಸಿದ್ದೇವೆ. ಅಲ್ಲಿ ನಾವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂಬ ನಿಲುವನ್ನು ಪಕ್ಷ ತೆಗೆದುಕೊಂಡಿತ್ತು. ಆದರೆ ಹಿಂದಿನ ಸರ್ಕಾರ ಕರ್ನಾಟಕಕ್ಕೆ ಮಹದಾಯಿ ವಿಷಯದಲ್ಲಿ ಪರಿಸರ ಅನುಮತಿ ನೀಡಿರುವುದನ್ನು ಸದನದಲ್ಲಿ ನೆನಪಿಸಿದರು.