ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಬಸ್ ಉರುಳಿ 15 ಮಂದಿಗೆ ಗಾಯ

ಬಸ್‌
Advertisement


ಚಾಮರಾಜನಗರ : ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಬುಧವಾರ ಬೆಳಿಗ್ಗೆ ಉರುಳಿ ಬಿದ್ದ ಘಟನೆ ವರದಿಯಾಗಿದೆ.
ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಮಹದೇಶ್ವರ ಬೆಟ್ಟ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.